ಪತ್ರಕರ್ತರಿಗೆ ಸಿಎಂ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಲಿ: ಕಾಂಗ್ರೆಸ್

Prasthutha|

ಬೆಂಗಳೂರು: ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ? ಆ ಹಣದ ಮೂಲ ಯಾವುದು? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವರೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಸಿಎಂ ಕಚೇರಿ ನೀಡಿದ 2.5 ಲಕ್ಷ ರೂ. ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ಧಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು ಎಂದು ಆಗ್ರಹಿಸಿದೆ.

ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ? 40% ಕಮಿಷನ್ ಆ ಹಣದ ಮೂಲವೇ? ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ? ಸಿಎಂ ಬೊಮ್ಮಾಯಿ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

- Advertisement -

40% ಕಮಿಷನ್ನಲ್ಲಿ ನೀಡಿದ ಹಣವೇ? 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ? ಸಿಎಂ ಬೊಮ್ಮಾಯಿ ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು. #SayCM ಎಂದು ಕಾಂಗ್ರೆಸ್ ಆಗ್ರಹಿಸಿದೆ.

Join Whatsapp
Exit mobile version