ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿ: ವಿಧಾನ ಪರಿಷತ್‌ನಲ್ಲಿ ಸರಕಾರದ ಗಮನ ಸೆಳೆದ ಬಿಎಂ ಫಾರೂಕ್

Prasthutha|

ಮಂಗಳೂರು: ಮಂಗಳೂರು ನಗರ ಉತ್ತರ ಕ್ಷೇತ್ರದ ಮಾಜಿ ಶಾಸಕ ಮೋಹಿಯುದ್ದೀನ್ ಬಾವ ಅವರ ಮನವಿಗೆ ಸ್ಪಂದಿಸಿದ ವಿಧಾನಪರಿಷತ್ ಸದಸ್ಯ ಶ್ರೀ ಬಿಎಂ ಫಾರೂಕ್, ತುಳು ಭಾಷೆಯನ್ನು ಕರ್ನಾಟಕ ರಾಜ್ಯದ 2 ನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ವಿಧಾನ ಪರಿಷತ್ ಕಲಾಪದಲ್ಲಿ ಸರಕಾರದ ಗಮನ ಸೆಳೆದಿದ್ದಾರೆ.

- Advertisement -

ವಿಧಾನಪರಿಷತ್‌ನಲ್ಲಿ ಸರ್ಕಾರದ ಗಮನ ಸೆಳೆಯುವ ಪ್ರಶ್ನೋತ್ತರ ಕಲಾಪದಲ್ಲಿ ಪ್ರಸ್ತಾಪಿಸಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಪ್ರಶ್ನೆ ಮಾಡಿದರು. ಈ ಕುರಿತಂತೆ ಸದನದಲ್ಲಿ ವಿಸ್ತೃತವಾಗಿ ಚರ್ಚೆಯಾಗಿದ್ದು, ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈಗಾಗಲೇ ಒಂದಕ್ಕಿಂತ ಹೆಚ್ಚು ಅಧಿಕೃತ ಭಾಷೆಗಳಿರುವ ರಾಜ್ಯಗಳಿಗೆ ವರದಿ ನೀಡುವಂತೆ ಪತ್ರ ಬರೆಯಲಾಗಿದ್ದು, ಈವರೆಗೂ ವರದಿ ಬರದ ಕಾರಣ ಕೂಡಲೇ ಕರ್ನಾಟಕ ಸರ್ಕಾರದ ಪರವಾಗಿ ಅಧಿಕಾರಿಗಳ ತಂಡವನ್ನು ಸದರಿ ರಾಜ್ಯಗಳಿಗೆ ಕಳುಹಿಸಿ ಕೂಡಲೇ ಮಾಹಿತಿ ಕರ್ನಾಟಕ ಸರ್ಕಾರಕ್ಕೆ ತರಿಸಿಕೊಂಡು ಕೆಲವೇ ದಿನಗಳಲ್ಲಿ ತುಳು ಭಾಷೆಯನ್ನು ಕರ್ನಾಟಕದ 2ನೇ ಅಧೀಕೃತ ಭಾಷೆಯನ್ನಾಗಿ ಘೋಷಣೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಚೇದಕ್ಕೆ ಸೇರಿಸುವ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಈ ಕುರಿತಂತೆ ಸಹ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗುವುದು ಎಂದೂ ಸಚಿವರು ಸದನದಲ್ಲಿ ತಿಳಿಸಿದ್ದಾರೆ..

Join Whatsapp