ವಿಜಯಪುರ: ವಿಜಯೇಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ. ನಾನು ರಾಜ್ಯಾಧ್ಯಕ್ಷನಾಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿಳಿಸಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಜೊತೆ ಹೊಂದಾಣಿಕೆ ಅಗುವಂತೆ ಮನವೊಲಿಕೆ ಯತ್ನ ವಿಚಾರವಾಗಿ ವಿಜಯಪುರದಲ್ಲಿ ಯತ್ನಾಳ್ ಪ್ರತಿಕ್ರಿಯಿಸಿ, ಅಂಥ ಪ್ರಯತ್ನಗಳು ನಡೆಯುತ್ತವೆ. ನಾನು ಕಾಂಪಿಟೇಟರ್ ಇದ್ದೇನೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವುದಾಗಿ ನನಗೆ ಹೇಳಿದರು. ವಿಜಯೇಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ. ನಾನು ರಾಜ್ಯಾಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದರು.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿಕೆಶಿ ಅಥವಾ ಡಿ.ಕೆ.ಸುರೇಶ್ ಸ್ಪರ್ಧೆ ಮಾಡುವ ಸಾಧ್ಯತೆ ಕುರಿತು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದು. ಆದರೆ ಚುನಾವಣೆ ಸ್ಪರ್ಧೆಯ ವಿಚಾರದಲ್ಲಿ ಚುನಾವಣಾ ಆಯೋಗ ಕೆಲ ಕಾಯ್ದೆಗಳನ್ನ ಮಾರ್ಪಾಡು ಮಾಡಬೇಕು. ಒಂದು ಕ್ಷೇತ್ರದಲ್ಲಿ ಸಂಸದ, ಶಾಸಕರಾಗಿದ್ದವರು ಮತ್ತೊಂದು ಕ್ಷೇತ್ರಕ್ಕೆ ಸ್ಪರ್ಧೆ ಮಾಡಲು ಅವಕಾಶ ನೀಡಬಾರದು. ಈ ಕುರಿತು ಹೊಸ ಕಾನೂನು ಜಾರಿ ಮಾಡಬೇಕೆಂದು ಒತ್ತಾಯಿಸಿದರು.