ದಾಖಲೆ ಇದ್ದರೆ ಯತ್ನಾಳ್ ತನಿಖೆ ಮಾಡಿಸಲಿ: ಸವಾಲ್ ಹಾಕಿದ ವಿಜಯೇಂದ್ರ

Prasthutha|

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬಸನಗೌಡ ಪಾಟೀಲ ಬಸನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಸಾಕ್ಷಿಗಳಿದ್ದರೆ ಸರಕಾರಕ್ಕೆ ನೀಡಿ ತನಿಖೆ ಮಾಡಿಸಲಿ ಎಂದು ಸವಾಲ್ ಹಾಕಿದ್ದಾರೆ. ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಕೋವಿಡ್ ಸಂದರ್ಭ 40 ಸಾವಿರ ಕೋಟಿ ರೂ. ಹಗರಣ ಮಾಡಿದ್ದಾರೆ ಎಂಬ ಹೇಳಿಕೆಗೆ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ವಿಜಯೇಂದ್ರ, ಯತ್ನಾಳ್ ಮಾಡಿರುವ ಆರೋಪದಲ್ಲಿ ಗಂಭೀರತೆ ಇಲ್ಲ, ಹೀಗಾಗಿ ಇಂಥವಕ್ಕೆಲ್ಲ ಉತ್ತರ ಕೊಡುವ ಅಗತ್ಯವಿಲ್ಲ. ಪ್ರಾಮಾಣಿಕ ಆಡಳಿತ ನಡೆಸಿರುವ ಯಡಿಯೂರಪ್ಪ ಅವರಿಗೆ ಯಾರ ಅನುಕಂಪದ ಅಗತ್ಯವೂ ಇಲ್ಲ ಎಂದಿದ್ದಾರೆ.

ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕೇಂದ್ರ ವರಿಷ್ಠರಿಗೆ ಯಾರೂ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಾನು ಯಡಿಯೂರಪ್ಪ ಅವರ ಮಗ ಎಂಬ ಕಾರಣಕ್ಕೆ ಅವರ ಕೃಪೆಯಿಂದ ಬಿಜೆಪಿ ವರಿಷ್ಠರು ನನ್ನನ್ನು ಪಕ್ಷದ ಅಧ್ಯಕ್ಷ ಸ್ಥಾನದ ಹೊಣೆ ನೀಡಿಲ್ಲ. ಪಕ್ಷ ಕಟ್ಟುವಲ್ಲಿ ಶ್ರಮಿಸಿದ ನನ್ನ ಸೇವೆಯನ್ನು ಪರಿಗಣಿಸಿ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ ಎಂದರು.

- Advertisement -

ಹಳೆಯ ವರ್ಷಕ್ಕೆ ವಿದಾಯ ಹೇಳುತ್ತಿದ್ದು, ಹೊಸ ವರ್ಷದ ಆಗಮನ ಸಂದರ್ಭದಲ್ಲಿ ಎಲ್ಲ ಹಳೆ ವಿಚಾರಗಳನ್ನು ಬದಿಗಿಟ್ಟು, ಎಲ್ಲರ ವಿಶ್ವಾಸಕ್ಕೆ ಪಡೆದು, ಪಕ್ಷವನ್ನು ಸಂಘಟಿಸುವ ಕೆಲಸದಲ್ಲಿ ತೊಡಗುತ್ತೇನೆ ಎನ್ನುವ ಮೂಲಕ ಯತ್ನಾಳ್ ಮಧ್ಯೆ ಇರುವ ಬಿರುಕು ಮುಚ್ಚುವ ಪ್ರಯತ್ನ ಮಾಡುತ್ತೇನೆಂಬ ಸುಳಿವು ನೀಡಿದರು.

Join Whatsapp