ಯತ್ನಾಳ್ ಅವರು ಬಸ್ ಸ್ಟ್ಯಾಂಡ್ ನಲ್ಲಿ ಗಿಣಿ ಶಾಸ್ತ್ರ ಹೇಳಲಿ: ಮಧು ಬಂಗಾರಪ್ಪ

Prasthutha|

ಶಿವಮೊಗ್ಗ: ಅರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂದು ಹೇಳುವ ಬಿಜೆಪಿ ಶಾಸಕ ಯತ್ನಾಳ್ ಅವರಿಗೆ ಈ ಬಸ್ ಸ್ಟ್ಯಾಂಡ್ ನಲ್ಲಿ ಜಾಗ ಖಾಲಿಯಿದೆ. ಅಲ್ಲಿ ಗಿಣಿ ಶಾಸ್ತ್ರ ಹೇಳಲಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಸಾಕ್ಷ್ಯಾಧಾರ ನೀಡಲಿ. ಸುಮ್ಮನೆ ಆರೋಪ ಮಾಡುವುದು ಬೇಡ. ಸಿಎಂ ಸಹ ಇದನ್ನೇ ಹೇಳಿದ್ದಾರೆ ಎಂದರು.


ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜಾರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೊಸ ಸರ್ಕಾರ ಬಂದಾಗ ಆಸೆ ಹಾಗೂ ಕಾರ್ಯಕ್ರಮದ ನಿರೀಕ್ಷೆ ಇರುತ್ತದೆ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಶೀಘ್ರವಾಗಿ ಈಡೇರಿಸುತ್ತಿದ್ದೇವೆ. ಆಗ ಮಾತ್ರ ಜನರು ನಮ್ಮ ಮೇಲಿಟ್ಟಿರುವ ನಂಬಿಕೆಗೆ ಬೆಲೆ ಬರುತ್ತದೆ ಎಂದರು.

Join Whatsapp