ದೇವೇಗೌಡರು ಪಕ್ಷದಿಂದ ಯಾರನ್ನು ಉಚ್ಛಾಟನೆ ಮಾಡುತ್ತಾರೆ ನೋಡೋಣ: ರೇವಣ್ಣ

Prasthutha|

►’ಇಬ್ರಾಹಿಂ ಕಾಂಗ್ರೆಸ್ ಹೋಗುವುದಾದರೆ ಸಂತೋಷ’

- Advertisement -


ಹಾಸನ: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೋಮವಾರ ತಮ್ಮ ಬೆಂಬಲಿಗರ ಮತ್ತು ಕಾರ್ಯಕರ್ತರ ಜೊತೆ ಸಭೆ ನಡೆಸಿದ್ದರು. ಈ ಬಗ್ಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಯಾರನ್ನು ಉಚ್ಛಾಟನೆ ಮಾಡುತ್ತಾರೆ ನೋಡೋಣ ಎಂದು ಗುಡುಗಿದ್ದಾರೆ.


ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರ ಅಂಗಳದಲ್ಲಿ ಚೆಂಡು ಇದೆ. ಅವರು ರಾಷ್ಟ್ರೀಯ ಅಧ್ಯಕ್ಷರಿದ್ದಾರೆ ತೀರ್ಮಾನ ಮಾಡುತ್ತಾರೆ. ಇಬ್ರಾಹಿಂ ಕಾಂಗ್ರೆಸ್ ಹೋಗುವುದಾದರೆ ಸಂತೋಷ, ನಮ್ಮದೇನು ಅಭ್ಯಂತರವಿಲ್ಲ. ಜೆಡಿಎಸ್ ಇಬ್ಭಾಗ ಆಗಲ್ಲ, 19 ಜನ ಎಂಎಲ್ ಎಗಳು ಇದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಈ ಪಾರ್ಟಿಗಾಗಿ ಏನೇನು ಮಾಡಿದ್ದಾರೆ ಅಂತ ಜನರಿಗೆ ಗೊತ್ತಿದೆ ಎಂದರು.

Join Whatsapp