Home ಟಾಪ್ ಸುದ್ದಿಗಳು ಸುಳ್ಳು, ಅಪಪ್ರಚಾರವೇ ಬಿಜೆಪಿಯ ಪ್ರಚಾರದ ಸರಕು: ಸಿದ್ದರಾಮಯ್ಯ

ಸುಳ್ಳು, ಅಪಪ್ರಚಾರವೇ ಬಿಜೆಪಿಯ ಪ್ರಚಾರದ ಸರಕು: ಸಿದ್ದರಾಮಯ್ಯ

ಬೆಂಗಳೂರು: ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯಹರಣವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಭಾರತೀಯ ಜನತಾ ಪಕ್ಷ ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿ ನಡೆಸುತ್ತಿರುವ ಅಪ ಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ರೈತರಾಮಯ್ಯ, ಕನ್ನಡ ರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಮ್ ಸಮುದಾಯಕ್ಕೆ ನಾನು ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೂ ಖುಷಿಪಡುವೆ ಎಂದು ಹೇಳಿದರು.

ಹಿಂದೂ ಕೋಮುವಾದದಷ್ಟೇ ಸ್ಪಷ್ಟತೆ ಮತ್ತು ಬದ್ದತೆಯಿಂದ ನಾನು ಮುಸ್ಲಿಮ್ ಮತ್ತಿತರ ಧರ್ಮಗಳ ಕೋಮುವಾದವನ್ನೂ ವಿರೋಧಿಸುತ್ತಾ ಬಂದಿದ್ದೇನೆ.  ಭಾರತೀಯ ಜನತಾ ಪಕ್ಷದ ರೀತಿಯಲ್ಲಿ ರಾಜಕೀಯ ಕಾರಣಕ್ಕಾಗಿ ಒಳ್ಳೆಯವರು-ಕೆಟ್ಟವರು ಎಂಬ ಭೇದವಿಲ್ಲದೆ ಸಾರಾಸಗಟಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡ ಕೋಮುವಾದದ ರಾಜಕೀಯವನ್ನು ನಾನು ಮಾಡಿದವನಲ್ಲ. ಮುಸ್ಲಿಮ್ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ,ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ದವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ.  ಈ ಬಗ್ಗೆ ನನಗೆ ಹೆಮ್ಮೆಯೂ ಇದೆ, ಅಭಿಮಾನವೂ ಇದೆ ಎಂದು ಹೇಳಿದರು.

Join Whatsapp
Exit mobile version