ಸೆಲ್ಫಿ ತೆಗೆದುಕೊಳ್ಳುವಾಗ ಬಂದೆರಗಿದ ಸಿಡಿಲು | ಹನ್ನೊಂದು ಮಂದಿ ಸ್ಥಳದಲ್ಲೇ ಸಾವು

Prasthutha: July 12, 2021

ಜೈಪುರ: ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್ನ ವಾಚ್ ಟವರ್ ಮೇಲೆ ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಇನ್ನು ಕೆಲವರು ಸಿಡಿಲಿನ ಶಬ್ದಕ್ಕೆ ಭಯಭೀತರಾಗಿ ವಾಚ್ ಟವರ್ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ರಾಜಸ್ತಾನ ಮಾತ್ರವಲ್ಲದೇ ಮಧ್ಯಪ್ರದೇಶ, ಉತ್ತರ ಪ್ರದೇಶ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿದ್ದು, ಸತತವಾಗಿ ಸುರಿಯುತ್ತಿರುವ ಮಳೆಗೆ ಹಾಗೂ ಸಿಡಿಲಾಘಾತಕ್ಕೆ ಸಿಲುಕಿ 68 ಮಂದಿ ಸಾವನ್ನಪ್ಪಿದ್ದಾಗಿ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಜೈಪುರದ ಟವರ್ ಮೇಲೆ ಸಿಡಿಲು ಬಡಿಯುವ ಸಮಯಕ್ಕೆ ಅಲ್ಲಿ 27 ಮಂದಿ ಇದ್ದರು ಎನ್ನಲಾಗಿದೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ. 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಅಂತೆಯೇ ಉತ್ತರ ಪ್ರದೇಶದ ವಿವಿಧೆಡೆಗಳಲ್ಲಿ ಮಳೆ ಹಾಗೂ ಸಿಡಿಲಿನಿಂದಾಗಿ 41 ಮಂದಿ ಬಲಿಯಾಗಿದ್ದರೆ, ಮಧ್ಯಪ್ರದೇಶದಲ್ಲಿ ಏಳು ಹಾಗೂ ರಾಜಸ್ಥಾನದಲ್ಲಿ 20 ಮಂದಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ