ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿ ಅವರು ಇಂದು ನಿಧನರಾಗಿದ್ದಾರೆ.
ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಇಂದು ನಿಧನರಾಗಿದ್ದಾರೆ.
50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ ಸಲ್ಲಿಸಿದ್ದರು.
ನಟಿ ಲೀಲಾವತಿ ಅವರು ನೆಲಮಂಗಲದ ಸೋಲದೇವನಹಳ್ಳಿ ಬಳಿ ಪುತ್ರ ವಿನೋದ್ ರಾಜ್ ಜೊತೆ ವಾಸವಾಗಿದ್ದರು. ಸಿನಿಮಾದಿಂದ ದೂರ ಉಳಿದುಕೊಂಡಿದ್ದ ಅವರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ವಿನೋದ್ ರಾಜ್ ಕೂಡ ಕೃಷಿ ಕೆಲಸ ಮಾಡುತ್ತಿದ್ದಾರೆ. ಲೀಲಾವತಿ ಅವರ ಅನಾರೋಗ್ಯದ ವಿಷಯ ತಿಳಿದ ಬಳಿಕ ಕನ್ನಡ ಚಿತ್ರರಂಗದ ಅನೇಕರು ಸೋಲದೇವನಹಳ್ಳಿಗೆ ಬಂದು ಆರೋಗ್ಯ ವಿಚಾರಿಸಿದ್ದರು.
ಪ್ರಶಸ್ತಿ-ಪುರಸ್ಕಾರಗಳು
2008 – ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
2006 – ಅತ್ತ್ಯುತ್ತಮ ಪೋಷಕನಟಿ ಫಿಲಂಫೇರ್ ಕನ್ನಡ – ಕನ್ನಡದ ಕಂದ
1999-2000 – ಡಾ. ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ