ಮಧ್ಯಾಹ್ನ 3.30ಕ್ಕೆ ಲೀಲಾವತಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ

Prasthutha|

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರ ಅಂತ್ಯ ಸಂಸ್ಕಾರವನ್ನು ಸರಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿವಶಂಕರ್ ತಿಳಿಸಿದ್ದಾರೆ.

- Advertisement -

ಸರಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದಿದ್ದಾರೆ.

ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ.

- Advertisement -

ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಅವರನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಗೆ ಅವರು ಮೃತಪಟ್ಟಿದ್ದಾರೆ. ಲೀಲಾವತಿ(1938) ದಕ್ಷಿಣ ಭಾರತದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 6೦೦ ಚಿತ್ರಗಳಲ್ಲಿ ನಟಿಸಿದ್ದಾರೆ.



Join Whatsapp