ನವದೆಹಲಿ: ಸಾಮಾಜಿಕ ಜಾಲತಾಣ ‘ಎಕ್ಸ್’ನ (ಟ್ವಿಟರ್) ಸಿಇಒ ಹುದ್ದೆಗೆ ಲಿಂಡಾ ಯಾಕಾರಿನೊ ರಾಜೀನಾಮೆ ಸಲ್ಲಿಸಿದ್ದಾರೆ.
ಲಿಂಡಾ ಅವರು ಇಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಎಕ್ಸ್’ ಕಂಪನಿಯ ಸಿಇಒ ಆಗಿ ಎರಡು ವರ್ಷ ಸೇವೆ ಸಲ್ಲಿಸಿದ್ದಾರೆ.
ರಾಜೀನಾಮೆ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಇದೊಂದು ಜೀವಮಾನದ ಅವಕಾಶ. ವಾಕ್ ಸ್ವಾತಂತ್ರ್ಯವನ್ನು ರಕ್ಷಿಸುವ, ಕಂಪನಿಯನ್ನು ಪುನರುಜ್ಜೀವನಗೊಳಿಸುವ ಮತ್ತು ‘ಎಕ್ಸ್’ ಅನ್ನು ‘ಎವೆರಿಥಿಂಗ್ ಅಪ್ಲಿಕೇಶನ್’ ಆಗಿ ಅಭಿವೃದ್ಧಿಪಡಿಸಲು ಅವಕಾಶ ನೀಡಿದಕ್ಕಾಗಿ ಇಲಾನ್ ಮಸ್ಕ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದಿದ್ದಾರೆ.
