ಮೈಸೂರು: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.
ಸಹಾಯಕ ಲೈನ್ ಮ್ಯಾನ್ ಸಂತೋಷ್(26) ಮೃತರು.
ಟ್ರಾನ್ಸ್ ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಹರಿದು ಈ ಅವಘಡ ನಡೆದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಮೃತ ಸಂತೋಷ್ ಪೋಷಕರು, ಸ್ನೇಹಿತರು ಆರೋಪಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸಿಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.