ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಯಡಿಯೂರಪ್ಪ ಆದೇಶ

Prasthutha|

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬಳಿಕ, ಲಿಂಗಾಯತ ಅಭಿವೃದ್ಧಿ ನಿಗಮದ ಆಗ್ರಹ ಕೇಳಿಬಂದಿತ್ತು. ಇದೀಗ ತೀವ್ರ ಒತ್ತಡಕ್ಕೆ ಮಣಿದು, ಯಡಿಯೂರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.

- Advertisement -

ನಿಗಮ ಸ್ಥಾಪನೆ ಮಾಡುವಂತೆ ವೀರಶೈವ ಲಿಂಗಾಯತ ಸಮುದಾಯದ ಬಹುದಿನಗಳ ಬೇಡಿಕೆಯಾಗಿತ್ತು. ಈ ಬೇಡಿಕೆಯನ್ನು ಯಡಿಯೂರಪ್ಪ ಇದೀಗ ಈಡೇರಿಸಿದ್ದು, ಸಂತಸವಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಂ.ಬಿ. ಪಾಟೀಲ್, ಲಿಂಗಾಯತರಿಗೆ ನಿಗಮ ಸ್ಥಾಪಿಸಿ 100-200 ಕೋಟಿ ಅನುದಾನ ಒದಗಿಸಿದರೆ ಸಾಲದು, ನೆರೆಯ ಮಹಾರಾಷ್ಟ್ರ ಮಾದರಿಯಲ್ಲಿ ಲಿಂಗಾಯತರಿಗೆ ಶೇ. 16018 ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

- Advertisement -