Home ಟಾಪ್ ಸುದ್ದಿಗಳು ಸಿಎಂ ಬದಲಾವಣೆ ಮಾಡುವುದಾದರೆ ಲಿಂಗಾಯತರಿಗೆ ಆದ್ಯತೆ ನೀಡಬೇಕು: ಶಿವಾಚಾರ್ಯ ಸ್ವಾಮಿ

ಸಿಎಂ ಬದಲಾವಣೆ ಮಾಡುವುದಾದರೆ ಲಿಂಗಾಯತರಿಗೆ ಆದ್ಯತೆ ನೀಡಬೇಕು: ಶಿವಾಚಾರ್ಯ ಸ್ವಾಮಿ

ಚಿಕ್ಕೋಡಿ: ಡಿಸಿಎಂ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ಒಕ್ಕಲಿಗ ಸ್ವಾಮಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಬೆನ್ನಲ್ಲೇ ಇದೀಗ ವಿವಿಧ ಸಮುದಾಯಗಳ ಸ್ವಾಮಿಗಳು ಆ ಬಗ್ಗೆ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮಿ ಆಗ್ರಹಿಸಿದ್ದಾರೆ.


ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನ ಹೆಚ್ಚುವರಿ ಮಾಡಿದರೆ ಲಿಂಗಾಯತರಿಗೆ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಎಂಬಿ ಪಾಟೀಲ್, ಈಶ್ವರ ಖಂಡ್ರೆ, ಎಸ್ ಎಸ್ ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು. ಕಾಶಿ, ಉಜ್ಜಯಿನಿ ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ ಎಂದರು.


ಒಂದು ವೇಳೆ ಆರಂಭದಲ್ಲಿ ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಒಂಡಂಬಡಕೆ ಮಾಡಿಕೊಂಡಿದ್ದರೆ, ಅದರ ಪ್ರಕಾರ ನಡೆದುಕೊಳ್ಳಲಿ ಎಂದು ಶ್ರೀಶೈಲ ಜಗದ್ಗುರುಗಳು ಹೇಳಿದ್ದಾರೆ.

Join Whatsapp
Exit mobile version