ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಮಾ.6ರವರೆಗೆ ವಿಸ್ತರಣೆ

Prasthutha|

ನವದೆಹಲಿ: ಮದ್ಯ ನೀತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ಆದೇಶವನ್ನು ನಗರ ನ್ಯಾಯಾಲಯವು ಶನಿವಾರ ಕಾಯ್ದಿರಿಸಿದ್ದು, ಮಾರ್ಚ್ 6 ರವರೆಗೆ ಅವರ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ.

- Advertisement -

ದೆಹಲಿ ಕ್ಯಾಬಿನೆಟ್ ಮತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಸೋಡಿಯಾ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಮಾರ್ಚ್ 10 ಕ್ಕೆ ನಿಗದಿಪಡಿಸಿದೆ ಎಂದು ತಿಳಿದು ಬಂದಿದೆ.

Join Whatsapp