ವಿರೋಧದ ಮಧ್ಯೆ ಮದ್ಯದಂಗಡಿ ಆರಂಭ: ಅಂಗಡಿಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಮಹಿಳೆಯರು

Prasthutha|

ಚಿಕ್ಕಮಗಳೂರು: ಹೊಸದಾಗಿ ಮದ್ಯದಂಗಡಿ ತೆರೆದುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಮಹಿಳೆಯರು ಮದ್ಯದ ಅಂಗಡಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.

- Advertisement -

ವಿರೋಧದ ಮಧ್ಯೆಯೂ ಮದ್ಯದಂಗಡಿ ತೆರೆದ ಹಿನ್ನೆಲೆಯಲ್ಲಿ ಕೋಪಗೊಂಡ 50ಕ್ಕೂ ಹೆಚ್ಚು ಮಹಿಳೆಯರು ಮದ್ಯದಂಗಡಿಗೆ ನುಗ್ಗಿ, ಅಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಲಾಗಿದೆ. ಬಾರ್ ತೆರೆಯದಂತೆ ಮುಸ್ಲಾಪೂರದ ಮಹಿಳೆಯರು ಈ ಹಿಂದೆ ಪ್ರತಿಭಟನೆ ನಡೆಸಿದ್ದರು. ವಿರೋಧದ ಮಧ್ಯೆಯೂ ಬಾರ್ ತೆರೆದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ. ಕಡೂರು ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp