ಮದ್ಯ ದುರಂತ: AIADMK ಶಾಸಕರು, ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ

Prasthutha|

ಚೆನ್ನೈ: ತಮಿಳುನಾಡಿನ ಕಲ್ಲಕುರಿಚ್ಚಿ ವಿಷಯುಕ್ತ ಮದ್ಯ ಸೇವನೆ ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಎಐಎಡಿಎಂಕೆ ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಗುರುವಾರ ಉಪವಾಸ ಸತ್ಯಾಗ್ರಹ ಆರಂಭಿಸಿದರು.

- Advertisement -


ಎಐಎಡಿಎಂಕೆ ಶಾಸಕರು ಕಪ್ಪು ಅಂಗಿ ಧರಿಸಿ, ರಾಜರತ್ನಂ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು.


ವಿಷಯುಕ್ತ ಮದ್ಯ ಸೇವಿಸಿ 60ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತದ ಬಗ್ಗೆ ರಾಜ್ಯ ವಿಧಾನಸಭೆಯಲ್ಲಿ ಪ್ರಸ್ತಾಪಿಸಲು ಅನುಮತಿ ನಿರಾಕರಿಸಿ, ಎಐಎಡಿಎಂಕೆ ಶಾಸಕರನ್ನು ಅಮಾನತುಗೊಳಿಸುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.

Join Whatsapp
Exit mobile version