ಬೆಂಗಳೂರು: ಮೂರು ದಿನಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್ಗೆ ಕಳುಹಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ಲೋಕಸಭಾ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯ ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆ ನಿರ್ವಹಣಾ ಸಮಿತಿ ಸಭೆ ಕರೆಯಲಾಗಿತ್ತು. ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಇಬ್ಬರು ವೀಕ್ಷಕರನ್ನು ಕಳಿಸಿದ್ದೆವು. ವೀಕ್ಷಕರಿಂದ ಬಂದಿರುವ ಹೆಸರುಗಳನ್ನು ಸಭೆಯ ಮುಂದೆ ಇಟ್ಟಿದ್ದೇವೆ. ಸಭೆಯಲ್ಲಿ ಚರ್ಚಿಸಿದ ಹೆಸರುಗಳನ್ನು ವರಿಷ್ಠರಿಗೆ ಕಳಿಸಲು ತೀರ್ಮಾನಿಸಿದ್ದೇವೆ ಎಂದರು.