Home ಟಾಪ್ ಸುದ್ದಿಗಳು ಸಾಹಿತಿ ಪ್ರೊ. ಜಿ ಎಸ್ ಸಿದ್ದಲಿಂಗಯ್ಯ ವಿಧಿವಶ

ಸಾಹಿತಿ ಪ್ರೊ. ಜಿ ಎಸ್ ಸಿದ್ದಲಿಂಗಯ್ಯ ವಿಧಿವಶ

0

ಬೆಂಗಳೂರು: ಸಾಹಿತಿ, ಲೇಖಕ ಜಿ ಎಸ್ ಸಿದ್ದಲಿಂಗಯ್ಯ (94) ಅವರು ವಯೋಸಹಜವಾದ ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸಿದ್ದಲಿಂಗಯ್ಯ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ನಿಧನರಾಗಿದ್ದರು. ಚಾಮರಾಜಪೇಟೆಯ ಲಿಂಗಾಯತರ ರುದ್ರಭೂಮಿಯಲ್ಲಿ ಇಂದು ಬುಧವಾರ ಮಧ್ಯಾಹ್ನ 3 ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಿದ್ದಲಿಂಗಯ್ಯ ಅವರು ಸಾಹಿತಿ, ಕವಿ ಹಾಗೂ ವಿಮರ್ಶಕರಾಗಿದ್ದ ಸಿದ್ದಲಿಂಗಯ್ಯನವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು. ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ,ಬಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version