ಎಲ್ ಜೆ ಪಿ ಸಂಸದನ ವಿರುದ್ಧ ಅತ್ಯಾಚಾರ ಆರೋಪ: ಎಫ್ ಐ ಆರ್ ದಾಖಲು

Prasthutha|

ನವದೆಹಲಿ: ಅತ್ಯಾಚಾರ ನಡೆಸಿದ ಆರೋಪದ ಮೇಲೆ ಲೋಕ ಜನಶಕ್ತಿ ಪಕ್ಷದ ಸಂಸದ ಪ್ರಿನ್ಸ್ ರಾಜ್ ಪಾಸ್ವಾನ್ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಸಂತ್ರಸ್ತೆ ಸುಮಾರು ಮೂರು ತಿಂಗಳ ಹಿಂದೆ ಕೊನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ದೆಹಲಿ ನ್ಯಾಯಾಲಯದ ನಿರ್ದೇಶನದ ಅನ್ವಯ ಪೊಲೀಸರು ಇದೀಗ ಸಂಸದ ಪ್ರಿನ್ಸ್ ರಾಜ್ ವಿರುದ್ಧ ಎಫ್ ಐಆರ್ ದಾಖಲು ಮಾಡಿದ್ದಾರೆ.

- Advertisement -


ನಾನು ಎಲ್ ಜೆಪಿ ಕಾರ್ಯಕರ್ತೆ. ನನಗೆ ಪ್ರಜ್ಞೆ ಇಲ್ಲದಾಗ ಅವರು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾಳೆ.


ಇನ್ನು ಆರೋಪವನ್ನು ತಳ್ಳಿ ಹಾಕಿರುವ ಪ್ರಿನ್ಸ್ ರಾಜ್ ಪಾಸ್ವಾನ್, ದೂರುದಾರ ಯುವತಿಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಮಾನ ಹಾನಿ ಮಾಡಲಾಗಿದೆ ಎಂದು ಹೇಳಿದ್ದಾರೆ.

- Advertisement -