Home ಟಾಪ್ ಸುದ್ದಿಗಳು ಅಂಗನವಾಡಿ ಕೇಂದ್ರಲ್ಲೇ ಎಲ್ ಕೆಜಿ, ಯುಕೆಜಿ ಆರಂಭ

ಅಂಗನವಾಡಿ ಕೇಂದ್ರಲ್ಲೇ ಎಲ್ ಕೆಜಿ, ಯುಕೆಜಿ ಆರಂಭ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್ ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ.


ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್ ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ ಇಂದು (ಜು.22) ಸಾಂಕೇತಿಕವಾಗಿ ಚಾಲನೆ ನೀಡಿದರು. ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.


ಇಂದಿನಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Join Whatsapp
Exit mobile version