Home ಟಾಪ್ ಸುದ್ದಿಗಳು ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ LKG,UKG ಶೀಘ್ರವೇ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ LKG,UKG ಶೀಘ್ರವೇ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್

ಇದು ದೇಶದಲ್ಲೇ ಮೊದಲು ಎಂದ ಸಚಿವೆ

ಭದ್ರಾವತಿ: ಇಡೀ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ LKG,UKG ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದು ದೇಶದಲ್ಲೇ ಮೊದಲು ಆಗಿದ್ದು, ಕೇಂದ್ರ ಸರ್ಕಾರ ಕೂಡ ಪೂರ್ವ ಪ್ರಾಥಮಿಕ ತರಗತಿಗಳಿಗೆ ಅನುದಾನ ಬಿಡುಗಡೆ ಮಾಡಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರು ನಮ್ಮ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು. ಇಂಥ ವ್ಯವಸ್ಥೆ ಹೊಂದಿರುವ 17,800 ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳಲಿವೆ ಎಂದರು.

ಸಕ್ಷಮ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ 170 ಕೋಟಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಜೊತೆಯಾಗಿ ನಿರ್ವಹಿಸಲಾಗುವುದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಭದ್ರಾವತಿ: ಇಡೀ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ LKG,UKG ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದು ದೇಶದಲ್ಲೇ ಮೊದಲು ಆಗಿದ್ದು, ಕೇಂದ್ರ ಸರ್ಕಾರ ಕೂಡ ಪೂರ್ವ ಪ್ರಾಥಮಿಕ ತರಗತಿಗಳಿಗೆ ಅನುದಾನ ಬಿಡುಗಡೆ ಮಾಡಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರು ನಮ್ಮ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು. ಇಂಥ ವ್ಯವಸ್ಥೆ ಹೊಂದಿರುವ 17,800 ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳಲಿವೆ ಎಂದರು.

ಸಕ್ಷಮ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ 170 ಕೋಟಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಜೊತೆಯಾಗಿ ನಿರ್ವಹಿಸಲಾಗುವುದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Join Whatsapp
Exit mobile version