ಅಪಘಾತಕ್ಕೀಡಾದ ವ್ಯಕ್ತಿಯನ್ನು ಜೆಸಿಬಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಸ್ಥಳೀಯರು; ವೀಡಿಯೋ ವೈರಲ್

Prasthutha|

ಭೋಪಾಲ್: ಆಂಬ್ಯುಲೆನ್ಸ್ ಸಮಯಕ್ಕೆ ಸ್ಥಳಕ್ಕೆ ತಲುಪಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯೊಬ್ಬನನ್ನು ಜೆಸಿಬಿಯಲ್ಲಿ ಆಸ್ಪತ್ರೆಗೆ ಸಾಗಿಸಿರುವ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ  ಈ ನಡೆದಿದೆ.

- Advertisement -

ಸರಕಾರದಿಂದ ಸರಿಯಾದ ಆಂಬ್ಯುಲೆನ್ಸ್ ಸೇವೆ ಒದಗಿಸದಿರುವುದೇ ಇಂತಹ ಘಟನೆಗಳಿಗೆ ಕಾರಣ  ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರ್ಹಿಯ ಖಿತೌಲಿ ರಸ್ತೆಯಲ್ಲಿ ಬೈಕ್ ಡಿಕ್ಕಿ  ಹೊಡೆದ ಪರಿಣಾಮ ವ್ಯಕ್ತಿಯೊಬ್ಬರ ಕಾಲು ಮುರಿದಿತ್ತು. ಕೂಡಲೇ ಸ್ಥಳೀಯರು 108 ನಂಬರ್ ಗೆ  ಕರೆ ಮಾಡಿ ವಿಷಯ ತಿಳಿಸಿದ್ದರು. ಆದರೆ ತಕ್ಷಣಕ್ಕೆ ಆಂಬ್ಯುಲೆನ್ಸ್ ಸೇವೆ ಸಿಗಲಿಲ್ಲ. ಮೂರ್ನಾಲ್ಕು ಆಟೋ ರಿಕ್ಷಾ ಚಾಲಕರು ಸಹಾಯ ಮಾಡಲು ನಿರಾಕರಿಸಿದ ಕಾರಣ ಗಾಯಾಳುವನ್ನು ನನ್ನ ಜೆಸಿಬಿ ಯಂತ್ರದ ಮೂಲಕವೇ ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು ಎಂದು ಜೆಸಿಬಿ ಮಾಲೀಕ ಪುಷ್ಪೇಂದ್ರ ವಿಶ್ವಕರ್ಮ ಹೇಳಿದ್ದಾರೆ.

- Advertisement -

ಹತ್ತಿರದ ಪಟ್ಟಣದಿಂದ ಆಂಬ್ಯುಲೆನ್ಸ್ ಬರುವುದು ತುಂಬಾ ತಡವಾಗಿತ್ತು. ಹೀಗಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಜೆಸಿಬಿಯಲ್ಲಿ ಕರೆತರಲಾಗಿದೆ ಎಂದು ಮುಖ್ಯ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿ ಪ್ರದೀಪ್ ಮುಧಿಯಾ ತಿಳಿಸಿದ್ದಾರೆ.

ರೋಗಿಗಳನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಲಭ್ಯವಿಲ್ಲದೆ ಅಗತ್ಯ ಚಿಕಿತ್ಸೆ ಸಿಗದೆ ರೋಗಿಗಳು ಸಾವನ್ನಪ್ಪಿರುವ ಅನೇಕ ಘಟನೆಗಳು ನಡೆದಿವೆ. ಹೀಗಾಗಿ ಸರಿಯಾದ ಆಂಬ್ಯುಲೆನ್ಸ್ ಸೇವೆ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಗಾಯಾಳುವನ್ನು ಜೆಸಿಬಿಯಲ್ಲಿ ಸಾಗಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



Join Whatsapp