ಲಂಡನ್ : ಹೊಸ ರೂಪಾಂತರಿತ ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಇಂಗ್ಲೆಂಡ್ ನಲ್ಲಿ ಸಂಪೂರ್ಣ ಲಾಕ್ ಡೌನ್ ವಿಧಿಸಲಾಗಿದೆ. ಫೆಬ್ರವರಿ ಮಧ್ಯಂತರದ ವರೆಗೆ ಲಾಕ್ ಡೌನ್ ಮುಂದುವರಿಯಲಿದೆ.
ಬುಧವಾರದಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳೂ ಬಂದ್ ಆಗಲಿದೆ, ಈ ಬಗ್ಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಘೋಷಣೆ ಮಾಡಿದ್ದಾರೆ.
ಕೆಲವೆಡೆ ಮಂಗಳವಾರ ಮಧ್ಯರಾತ್ರಿಯಿಂದಲೇ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಈಗಾಗಲೇ ಇಂಗ್ಲೆಂಡ್ ನ ಜನಸಂಖ್ಯೆಯ ಮುಕ್ಕಾಲು ಭಾಗ ಜನ ಕಠಿಣ ನಿಯಂತ್ರಣಕ್ಕೊಳಪಟ್ಟಿದ್ದಾರೆ. ಆದರೆ, ಕೊರೊನ ವೈರಸ್ ಸೋಂಕು ಹರಡುತ್ತಿರುವುದನ್ನು ತಡೆಯಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.
ಹೊಸ ರೂಪಾಂತರಿತ ಕೊರೊನ ವೈರಸ್ ವ್ಯಾಪಕವಾಗಿ ಹರಡುತ್ತಿರುವುದು ಇಂಗ್ಲೆಂಡ್ ಜನರನ್ನು ಆತಂಕಕ್ಕೀಡು ಮಾಡಿದೆ.