ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಿಸಲಾಗಿದ್ದು, ಮೇ 24ರವರೆಗೆ ಲಾಕ್‌ಡೌನ್ ಅನ್ನು ವಿಸ್ತರಿಸಲು ನಿರ್ಧರಿಸಲಾಗಿದೆ” ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.
ಈ ಕುರಿತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದು, “ಲಾಕ್‌ಡೌನ್ ಪರಿಣಾಮ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಇಷ್ಟು ದಿನಗಳ ಕಾಲ ನಾವು ಪಟ್ಟ ಪರಿಶ್ರಮವನ್ನು ನಾವು ನಷ್ಟವಾಗಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಮತ್ತೆ ಇನ್ನೂ ಒಂದು ವಾರ ಲಾಕ್‌ಡೌನ್ ಅನ್ನು ವಿಸ್ತರಿಸಲಾಗುತ್ತಿದೆ. ಮುಂದಿನ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್ ಜಾರಿಯಲ್ಲಿರಲಿದೆ” ಎಂದು ತಿಳಿಸಿದ್ದಾರೆ. ದೆಹಲಿಯಲ್ಲಿ ಒಂದು ತಿಂಗಳ ಬಳಿಕ 10,000ಕ್ಕಿಂತಲೂ ಕಡಿಮೆ ಕೊರೊನಾ ಪ್ರಕರಣಗಳು ವರದಿಯಾಗಿವೆ.