ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್: ಕೇಜ್ರಿವಾಲ್

Prasthutha|

ದೆಹಲಿ: ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲದೆ ನಗರದ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಯೂ ನಿರಂತರವಾಗಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ಅನ್ನು ಇನ್ನೂ ಒಂದು ವಾರದವರೆಗೆ ವಿಸ್ತರಿಸುವುದಾಗಿ ತಿಳಿಸಿದ್ದಾರೆ.

- Advertisement -

‘ದೆಹಲಿಯ ಲಾಕ್ಡೌನ್ ಅನ್ನು ಒಂದು ವಾರ ವಿಸ್ತರಿಸಲಾಗುತ್ತಿದೆ’ ಎಂದು ಕೇಜ್ರಿವಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಮೇ 3 ರಂದು ಬೆಳಿಗ್ಗೆ 5 ಗಂಟೆಗೆ ಮುಕ್ತಾಯಗೊಳ್ಳಬೇಕಿದ್ದ ಲಾಕ್‌ಡೌನ್ ಈಗ ಮತ್ತೊಂದು ವಾರ ವಿಸ್ತರಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ ಶನಿವಾರ ಬೆಳಿಗ್ಗೆ 401,993 ಹೊಸ ಪ್ರಕರಣಗಳನ್ನು ದಾಖಲಿಸಿದ್ದು, ಆ ಮೂಲಕ ನಾಲ್ಕು ಲಕ್ಷಕ್ಕೂ ಹೆಚ್ಚು ಹೊಸ ಕೊರೊನಾ ಸೋಂಕು ಪ್ರಕರಣಗಳನ್ನು ದಾಖಲಿಸಿದ ವಿಶ್ವದ ಮೊದಲ ದೇಶ ಎನಿಸಿದೆ. ಸಾವಿನ ಸಂಖ್ಯೆ 3,523 ರಷ್ಟು ಏರಿಕೆಯಾಗಿದ್ದು, ಈ‌ ನಡುವೆ, ದೇಶದಲ್ಲಿ ಲಸಿಕೆಗಳನ್ನು ಖರೀದಿಸಲು ವಿಳಂಬವಾಗುತ್ತಿರುವುದರಿಂದ ಮೇ ಒಂದರಿಂದ‌ ಲಸಿಕೆ ನೀಡುವ ಕಾರ್ಯಕ್ರಮ ವಿಳಂಬವಾಗಲಿದೆ ಎಂದು ದೆಹಲಿ ಸೇರಿದಂತೆ ಹಲವಾರು ರಾಜ್ಯಗಳು ಸೂಚಿಸಿವೆ.
18 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಲಸಿಕೆ ಹಾಕುವ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಮೇ 3 ರೊಳಗೆ ಸುಮಾರು ಮೂರು ಲಕ್ಷ ಡೋಸ್ ಕೋವಿಶೀಲ್ಡ್ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದರು.

Join Whatsapp