ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಬಗ್ಗೆ ಪರೋಕ್ಷ ಸುಳಿವು ನೀಡಿದ ನಳಿನ್ ಕುಮಾರ್ ಕಟೀಲ್ !

Prasthutha|

ಮಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೋವಿಡ್ ಪ್ರಕರಣಗಳಿಂದ ಜನರು ಹೈರಾಣಾಗಿದ್ದಾರೆ. ಈ ನಡುವೆ ಸರಕಾರ ನಡೆಸಲು ಸಂಬಂಧಪಟ್ಟವರೇ ಇಲ್ಲದಂತೆ ರಾಜ್ಯ ನಡೆಯುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ಪೀಡಿತರಾಗಿ ಆಸ್ಪತ್ರೆಯಲ್ಲಿದ್ದಾರೆ. ಈ ಮಧ್ಯೆ ಬಿಜೆಪಿ ಮುಂಚೂಣಿ ನಾಯಕರು ಕ್ಷಣಕ್ಕೊಂದು ಹೇಳಿಕೆ ನೀಡುತ್ತಾ ಜನರನ್ನು ಗೊಂದಲದಲ್ಲಿ ಸಿಲುಕಿಸುತ್ತಿದ್ದಾರೆ. ಜೊತೆಗೆ ಇಂದು ರಾಜ್ಯಪಾಲರು ಹಲವರ ವಿರೋಧದ ನಡುವೆ ಸರ್ವ ಪಕ್ಷಗಳ ಸಭೆ ನಡೆಸಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸುವ ಬಗ್ಗೆ ಸುಳಿವು ನೀಡಿದ್ದಾರೆ.

- Advertisement -

ಈ ಕುರಿತು ಮಾತನಾಡಿದ ಅವರು, ಜನರು ಮಾಸ್ಕ್ ಹಾಕದೆ ತಿರುಗಾಡುತ್ತಿದ್ದಾರೆ. ಸಾಮಾಜಿಕ ಅಂತರವೂ ಕಡಿಮೆಯಾಗಿದೆ. ಇದನ್ನು ತಪ್ಪಿಸಲು ಕಠಿಣ ನಿರ್ಧಾರ ಸರ್ಕಾರ ತೆಗೆದುಕೊಳ್ಳಬಹುದು. ಜನರು ಸರ್ಕಾರದ ನಿರ್ಧಾರಕ್ಕೆ ಬೆಂಬಲ ನೀಡಬೇಕು. ಎಲ್ಲಾ ಪಕ್ಷದವರೂ ಸರ್ಕಾರದ ನಿರ್ಧಾರಕ್ಕೆ ಬೆಂಬಲ ನೀಡಬೇಕು ಎಂದು ಹೇಳಿದ್ದಾರೆ.

ಇಂದಿನ ಸಭೆಯಲ್ಲಿ ಈಗಾಗಲೇ ಪ್ರತಿಪಕ್ಷದ ಮುಖಂಡರು ಅಭಿಪ್ರಾಯ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ,ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ತಜ್ಞರ ಜೊತೆ ಸಭೆ ಬಳಿಕ ಅಂತಿಮ‌ ನಿರ್ಧಾರ ಹೊರ ಬೀಳಲಿದೆ ಎಂದು ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ರಾಜ್ಯಪಾಲರ ಜೊತೆಗಿನ ವೀಡಿಯೊ ಕಾನ್ಫರೆನ್ಸ್ ಬಳಿಕ ಹೇಳಿಕೆ ನೀಡಿದ್ದಾರೆ.

Join Whatsapp