ದ.ಕ ಜಿಲ್ಲೆಯಲ್ಲಿ ಸೋಮವಾರದಿಂದ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆಗೆ ಜಿಲ್ಲಾಡಳಿತ ಚಿಂತನೆ?

Prasthutha: June 19, 2021

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ ಹಂತಹಂತವಾಗಿ ಲಾಕ್ ಡೌನ್ ಸಡಿಲಿಕೆಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.

ರಾಜ್ಯ ಸರ್ಕಾರ ಅನುಮತಿ ಕೊಟ್ಟರೆ ಜಿಲ್ಲೆಯಲ್ಲಿ ಸೋಮವಾರದಿಂದ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ ಮಾಡಿ ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಗಮನಕ್ಕೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ.

ಅಗತ್ಯ ವಸ್ತುಗಳ ಜೊತೆಗೆ ಇತರೆ ಅಂಗಡಿ, ಶಾಪ್ ತೆರೆಯಲು ಅನುಮತಿ ನೀಡುವ ಸಾಧ್ಯತೆಯಿದ್ದು, ವಾರದಲ್ಲಿ ಮೂರು ದಿನ ಅಗತ್ಯ ವಸ್ತು, ಉಳಿದ ನಾಲ್ಕು ದಿನ ಇತರೆ ಅಂಗಡಿ ತೆರೆಯಲು ಅನುಮತಿ ಸಿಗುವ ಸಾಧ್ಯತೆ ಇದೆ.

ಒಂದು ದಿನ ಅಗತ್ಯ ವಸ್ತುವಿಗಷ್ಟೇ ಅನುಮತಿಸಿ ಇನ್ನೊಂದು ದಿನ ಇತರೆ ಶಾಪ್ ಗಳಿಗೆ ಅನುಮತಿ ನೀಡಲಿದ್ದು, ಮಧ್ಯಾಹ್ನದವರೆಗಷ್ಟೇ ವ್ಯವಹಾರ ನಡೆಸಲು ಅನುಮತಿ ನೀಡುವ ಸಾಧ್ಯತೆ ಇದೆ.

ಇನ್ನು ಸಭೆ, ಸಮಾರಂಭ, ಥಿಯೇಟರ್ ಮತ್ತು ಮಾಲ್ ಗಳಿಗೆ ಸದ್ಯ ನಿಷೇಧ ಹೇರಲಾಗುವುದು. ಅದೇ ರೀತಿ ಬಸ್ ಸಂಚಾರಕ್ಕೆ ಅನುಮತಿ ಕೊಡುವುದು ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಟ್ಟದ್ದು ಎಂದು ಜಿಲ್ಲಾಡಳಿತ ತಿಳಿಸಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ