ಲಾಕಪ್ ಡೆತ್ ಅಲ್ಲ, ಆದರೂ ಪೊಲೀಸರ ಅಮಾನತಿಗೆ ಸೂಚಿಸಿದ್ದೇನೆ: ಸಿದ್ದರಾಮಯ್ಯ

Prasthutha|

ಮೈಸೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಯುವಕನ ಸಾವು ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

- Advertisement -


ಮೈಸೂರಿನಲ್ಲಿ ಮಾತನಾಡಿದ ಅವರು, ಮೃತ ಯುವಕನಿಗೆ ಮೂರ್ಛೆ ರೋಗ ಇತ್ತು. ಅದರಿಂದ ಆತ ಮೃತ ಪಟ್ಟಿದ್ದಾನೆ. ಆದರೆ, ಎಫ್ ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಸೂಚಿಸಿದ್ದೇನೆ ಎಂದರು.


ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎಂಬ ವ್ಯಕ್ತಿಯನ್ನು ಶುಕ್ರವಾರ ಪೊಲೀಸರು ಠಾಣೆಗೆ ಕರೆ ತಂದಿದ್ದರು. ಪೊಲೀಸರು ಠಾಣೆಗೆ ಕರೆ ತರುತ್ತಿದ್ದಂತೆ ಆರೋಪಿ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಾಗಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

Join Whatsapp
Exit mobile version