Home ಟಾಪ್ ಸುದ್ದಿಗಳು ಇಂದು ‘INDIA’ 3ನೇ ಸಭೆ; ಪ್ರಧಾನಿ ಅಭ್ಯರ್ಥಿ ಆಯ್ಕೆ ಸಂಭವ

ಇಂದು ‘INDIA’ 3ನೇ ಸಭೆ; ಪ್ರಧಾನಿ ಅಭ್ಯರ್ಥಿ ಆಯ್ಕೆ ಸಂಭವ

►ಒಕ್ಕೂಟದ ಹೊಸ ಲೋಗೋ ಅನಾವರಣ

ಮುಂಬೈ: 2024ರ ಲೋಕಸಭೆ ಚುನಾವಣೆಗೆ ಸಿದ್ಧತೆಯ ಭಾಗವಾಗಿ ಮುಂಬೈಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ವಿಪಕ್ಷಗಳ ಮಹಾ ಮೈತ್ರಿ ‘ಇಂಡಿಯಾ’ ಒಕ್ಕೂಟದ ಮೂರನೇ ಸಭೆ ನಡೆಯಲಿದೆ.

ಪಾಟ್ನಾ, ಬೆಂಗಳೂರು ಬಳಿಕ ಮುಂಬೈನಲ್ಲಿ ಮೂರನೇ ಸಭೆ ನಿಗದಿಯಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟಕ್ಕೆ ಪ್ರಬಲ ಪೈಪೋಟಿ ನೀಡಲು ರಚನೆಯಾಗಿರುವ ‘ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ ಕ್ಲೂಸಿವ್ ಅಲಯನ್ಸ್’ ಮೈತ್ರಿಕೂಟದ ಮೂರನೆಯ ಸಭೆ ನಡೆಯಲಿದ್ದು, ಇಂದು ನಡೆಯುವ ಪ್ರತಿಪಕ್ಷಗಳ ಸಭೆಯಲ್ಲಿ, INDIA ಮೈತ್ರಿಕೂಟದ ಸದಸ್ಯರು 2024 ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ಒಂದು ಲೋಗೋ, ಸಮನ್ವಯ ಸಮಿತಿ ಮತ್ತು ಜಂಟಿ ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.

28 ರಾಜಕೀಯ ಪಕ್ಷಗಳ 63 ಪ್ರತಿನಿಧಿಗಳು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನ ಗ್ರ್ಯಾಂಡ್ ಹಯಾಟ್ ಹೋಟೆಲ್‌ನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮೈತ್ರಿಕೂಟದ ಲೋಗೋ ಅನಾವರಣ ಜೊತೆಗೆ ಎಲ್ಲಾ ಸದಸ್ಯ ಪಕ್ಷಗಳ ನಡುವೆ ಸಮನ್ವಯವನ್ನು ಹೆಚ್ಚಿಸಲು ಸಮಿತಿಯನ್ನು ರಚಿಸುವುದೇ ಸಭೆಯ ಮುಖ್ಯ ಉದ್ದೇಶವಾಗಿದೆ ಎನ್ನಲಾಗಿದ್ದು, ಮಮತಾ ಬ್ಯಾನರ್ಜಿ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಸೇರಿದಂತೆ ಹಲವು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಹಿರಿಯ ನಾಯಕರು ಈಗಾಗಲೇ ಮುಂಬೈಗೆ ಆಗಮಿಸಿದ್ದಾರೆ. ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್, ನಿತೀಶ್ ಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಂದು ಮುಂಬೈಗೆ ಬಂದಿಳಿಯಲಿದ್ದು ಇದಾದ ಬಳಿಕ ಉದ್ಧವ್ ಠಾಕ್ರೆ ಆಯೋಜಿಸಿರುವ ಔತಣಕೂಟದಲ್ಲಿ ಎಲ್ಲಾ ಸದಸ್ಯರು ಭಾಗವಹಿಸಲಿದ್ದಾರೆ.

Join Whatsapp
Exit mobile version