Home ಟಾಪ್ ಸುದ್ದಿಗಳು ಲೋಕಸಭಾ ಚುನಾವಣೆ: ಬಿಜೆಪಿ- ಜೆಡಿಎಸ್ ಮೈತ್ರಿ ಖಚಿತ?

ಲೋಕಸಭಾ ಚುನಾವಣೆ: ಬಿಜೆಪಿ- ಜೆಡಿಎಸ್ ಮೈತ್ರಿ ಖಚಿತ?

►ಸದ್ಯಕ್ಕೆ 4 ಸೀಟಿಗೆ ಓಕೆ ಎಂದ ಅಮಿತ್ ಶಾ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸುವುದು ಖಚಿತವಾಗಿದೆ.

ಈ ಬಗ್ಗೆ ಸ್ವತಃ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಖಚಿತಪಡಿಸಿದ್ದಾರೆ.

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜೆಡಿಎಸ್ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿ ರವಾನಿಸಿದ್ದು, ಜೆಡಿಎಸ್ ಜೊತೆಗಿನ ಮೈತ್ರಿ ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ತಮಗೆ ಕೊಡಿ ಎಂದು ದೇವೇಗೌಡ್ರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಆದ್ರೆ, ಇದಕ್ಕೆ ಅಮಿತ್‌ ಶಾ ಸದ್ಯಕ್ಕೆ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಮಂಡ್ಯವನ್ನು ಬಿಟ್ಟು ಇನ್ನುಳಿದ ನಾಲ್ಕು ಕ್ಷೇತ್ರಗಳನ್ನು ನೀಡಲು ಶಾ ಗ್ರೀನ್​ ಸಿಗ್ನಲ್​ ನೀಡಿದ್ದು, ಇನ್ನೊಂದು ಸೀಟಿನ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸೋಣ ಎಂದಿದ್ದಾರೆ ಎಂದು ತಿಳಿದುಬಂದಿದೆ.

Join Whatsapp
Exit mobile version