ಲೋಕಸಭಾ ಚುನಾವಣೆ: ಚಪ್ಪಲಿ ಹಾರ ಹಾಕಿಕೊಂಡು ಮತಯಾಚನೆ ಮಾಡುತ್ತಿರುವ ಅಭ್ಯರ್ಥಿ..!

Prasthutha|

ಲಕ್ನೋ: ಲೋಕಸಭಾ ಚುನಾವಣೆಗೆ ದೇಶಾದ್ಯಂತ ಬಿಸಿ ಬಿಸಿ ವಾತಾವರಣ ನಿರ್ಮಾಣವಾಗಿದೆ. ಉತ್ತರಪ್ರದೇಶದ ಅಲಿಗಢ್‌ ನಲ್ಲಿ ಅಭ್ಯರ್ಥಿಯೊಬ್ಬರು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸಿ ಅಚ್ಚರಿ ಮೂಡಿಸಿದ್ದಾರೆ.

- Advertisement -

ಅಲಿಗಢದ ಸ್ವತಂತ್ರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಗೌತಮ್ ಚಪ್ಪಲಿ ಹಾರ ಹಾಕಿಕೊಂಡು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಹೂವಿನ ಹಾರದ ಬದಲು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸಿದ್ದನ್ನು ಕಂಡು ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಪಂಡಿತ್ ಕೇಶವ್ ದೇವ್ ಅವರು ಸ್ವತಂತ್ರ ಅಭ್ಯರ್ಥಿಯಾಗಿದ್ದು, ಅವರ ಚುನಾವಣಾ ಚಿಹ್ನೆ ಚಪ್ಪಲಿ ಆಗಿದೆ. ಸ್ವತಃ ಕೇಶವ್ ದೇವ್ ಅವರೇ ಚಪ್ಪಲಿ ಚುನಾವಣಾ ಚಿಹ್ನೆಗೆ ಅರ್ಜಿ ಸಲ್ಲಿಸಿರುವುದಾಗಿದೆ. ಅದರಂತೆ ಚಿಹ್ನೆ ದೊರೆತ ಬಳಿಕ ಕೊರಳಿಗೆ 7 ಚಪ್ಪಲಿಗಳನ್ನು ಹಾರ ಮಾಡಿ ಹಾಕಿಕೊಂಡು ಪ್ರಚಾರ ನಡೆಸುತ್ತಿದ್ದಾರೆ.

Join Whatsapp
Exit mobile version