Home ಟಾಪ್ ಸುದ್ದಿಗಳು ಲೋಕಸಭೆ ಚುನಾವಣೆ: ಶತಕ ಬಾರಿಸಿದ ಕಾಂಗ್ರೆಸ್

ಲೋಕಸಭೆ ಚುನಾವಣೆ: ಶತಕ ಬಾರಿಸಿದ ಕಾಂಗ್ರೆಸ್

ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್ ನ ಸೀಟ್ ಗಳ ಸಂಖ್ಯೆ 100ಕ್ಕೆ ಏರಿಕೆ

ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದ ಸಂಸದರೊಬ್ಬರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಒಟ್ಟು ಸದಸ್ಯರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.


ಈ ಮೂಲಕ ಕಾಂಗ್ರೆಸ್ ಪಕ್ಷ ಶತಕದ ಸಂಭ್ರವನ್ನಾಚರಿಸಿದೆ. ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿ ಪಾಲುದಾರ ಶಿವಸೇನೆ (ಯುಬಿಟಿ) ಗೆ ಟಿಕೆಟ್ ನೀಡಿದ್ದಕ್ಕೆ ಬೇಸರಗೊಂಡಿದ್ದ ಕಾಂಗ್ರೆಸ್ ಮುಖಂಡ ವಿಶಾಲ್ ಪಾಟೀಲ್ ಸಾಂಗ್ಲಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಅವರು ಮಾತೃಪಕ್ಷಕ್ಕೆ ವಾಪಸಾಗಿರುವ ಕಾರಣ ಕಾಂಗ್ರೆಸ್ ಸದಸ್ಯರ ಸಂಖ್ಯೆ ಹೆಚ್ಚಿದೆ.


ಉದ್ಧವ್ ಠಾಕ್ರೆ ಈ ಸ್ಥಾನವನ್ನು ಕಾಂಗ್ರೆಸ್ಗೆ ಬಿಟ್ಟುಕೊಡಲು ನಿರಾಕರಿಸಿದ್ದರು. ಹೀಗಾಗಿ ಪಾಟಿಲ್ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಸಮೀಪದ ಬಿಜೆಪಿಯ ಸಂಜಯ್ ಪಾಟೀಲ್ ಅವರನ್ನು 1,00,053 ಮತಗಳಿಂದ ಸೋಲಿಸಿದ್ದರು. ಇಲ್ಲಿ ಶಿವಸೇನೆ ಅಭ್ಯರ್ಥಿ ಚಂದ್ರಹರ್ ಪಾಟೀಲ್ ಕೇವಲ 60,860 ಮತಗಳನ್ನು ಪಡೆದಿದ್ದರು.


ಮಹಾರಾಷ್ಟ್ರದ ಜನರು ದ್ರೋಹ, ಅಹಂಕಾರ ಮತ್ತು ವಿಭಜನೆಯ ರಾಜಕೀಯವನ್ನು ಸೋಲಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರಂತಹ ನಮ್ಮ ಪ್ರೇರಣಾದಾಯಕ ನಾಯಕರಿಗೆ ಇದು ಸೂಕ್ತ ಗೌರವವಾಗಿದೆ. ಸಾಂಗ್ಲಿಯ ಚುನಾಯಿತ ಸಂಸದ ಶ್ರೀ ವಿಶಾಲ್ ಪಾಟೀಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನು ಸ್ವಾಗತಿಸುತ್ತೇನೆ. ಸಂವಿಧಾನ ದೀರ್ಘಕಾಲ ಸುರಕ್ಷಿತವಾಗಿರಲಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Join Whatsapp
Exit mobile version