Home ಟಾಪ್ ಸುದ್ದಿಗಳು ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ

ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ

ನವದೆಹಲಿ: ಏ.19ರಂದು 102 ಕ್ಷೇತ್ರಗಳಿಗೆ ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.

ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಮತದಾನ ನಡೆಯಲಿದೆ.

ಚುನಾವಣಾ ಆಯೋಗದ ಪ್ರಕಾರ. ಮಾರ್ಚ್ 27 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮಾರ್ಚ್ 28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮಾರ್ಚ್ 30 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

Join Whatsapp
Exit mobile version