ಲೋಕಸಭಾ ಚುನಾವಣೆ: ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Prasthutha|

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.

- Advertisement -


2014ರಲ್ಲಿ ಮೊದಲ ಬಾರಿಗೆ ಗೆದ್ದಿದ್ದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಮೂರನೇ ಬಾರಿಗೆ ಆಯ್ಕೆಯಾಗುವ ಭರವಸೆಯನ್ನು ಪ್ರಧಾನಿ ವ್ಯಕ್ತಪಡಿಸಿದ್ದಾರೆ. ‘ಕಾಶಿಯೊಂದಿಗಿನ ನನ್ನ ಸಂಬಂಧ ಬೇರ್ಪಡಿಸಲಾಗದಂತದ್ದು. ಪದಗಳಲ್ಲಿ ಅದನ್ನು ವರ್ಣಿಸಲು ಸಾಧ್ಯವಿಲ್ಲ’ ಎಂದು ಅವರು ಎಕ್ಸ್ ನಲ್ಲಿ ಹೇಳಿದ್ದಾರೆ.

- Advertisement -



Join Whatsapp