Home ಟಾಪ್ ಸುದ್ದಿಗಳು ಲೋಕಸಭೆ ಚುನಾವಣೆ: ಅಮೇಠಿಯಿಂದ ರಾಹುಲ್‌ ಸ್ಪರ್ಧೆ

ಲೋಕಸಭೆ ಚುನಾವಣೆ: ಅಮೇಠಿಯಿಂದ ರಾಹುಲ್‌ ಸ್ಪರ್ಧೆ

ಮಂಬೈ: 2024 ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಎಲ್ಲಿ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗೆ ತೆರೆಬಿದ್ದಿದೆ. ಅವರು ಅಮೇಠಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಅಜಯ್‌ ರೈ ಹೇಳಿದ್ದಾರೆ.

ಅಮೇಠಿಯ ಜನರಿಗಾಗಿ ಗಾಂಧಿ ಕುಟುಂಬವು ತಲೆತಲಾಂತರದಿಂದ ಸೇವೆ ಸಲ್ಲಿಸುತ್ತಿದೆ. ರಾಹುಲ್‌ ಗಾಂಧಿ ಅವರು ಅಲ್ಲಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಜಯ್ ರೈ ಹೇಳಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಅಮೇಠಿಯಿಂದಲ್ಲದೆ ಕೇರಳದ ವಯನಾಡು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧಿಸಿದ್ದರು. ಆದರೆ ಅಮೇಠಿಯಲ್ಲಿ ಅವರು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು.

Join Whatsapp
Exit mobile version