ಲೋಕಸಭಾ ಚುನಾವಣೆ; ಗೆಲ್ಲುವ ಅಭ್ಯರ್ಥಿಗಳ ಹುಡುಕಾಟ ನಡೆಯುತ್ತಿದೆ: ಸತೀಶ್ ಜಾರಕಿಹೊಳಿ

Prasthutha|

ಬೆಂಗಳೂರು: ರಾಜ್ಯದ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಪಕ್ಷಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಬ್ಬರೂ ಗೆಲ್ಲಬಹುದಾದ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ವೀಕ್ಷಕರಿಗೆ ಸೂಚನೆ ನೀಡಿದ್ದಾರೆ. ದುರ್ಬಲ ಅಭ್ಯರ್ಥಿಗಳು ಇರುವ ಕ್ಷೇತ್ರಗಳಿಗೆ ಇತರೆ ಪಕ್ಷಗಳಿಂದ ನಾಯಕರನ್ನು ಕರೆತಂದು ಆದರೂ ಗೆಲ್ಲುವ ಸಾಧಿಸುವ ಉದ್ದೇಶವಿದೆ ಎಂದು ಹೇಳಿದರು.



Join Whatsapp