ಲೋಕಸಭೆ ಚುನಾವಣೆ | ಚಿಕ್ಕಮಗಳೂರಿನಿಂದಲೇ ಸ್ಪರ್ಧೆ: ಶೋಭಾ ಕರಂದ್ಲಾಜೆ ಸ್ಪಷ್ಟನೆ

Prasthutha|

ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು– ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ’ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ಸ್ಪಷ್ಟಪಡಿಸಿದರು.

- Advertisement -


ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ಇಲ್ಲಿಗೆ ಬಂದು ಸ್ಪರ್ಧೆ ಮಾಡುವುದಿಲ್ಲ’ ಎಂದು ಹೇಳಿದರು.


‘ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆ ಆಗಿದ್ದು, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದರು.



Join Whatsapp