ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಇಂದು (ಬುಧವಾರ) ಬಿಡುಗಡೆ ಮಾಡಿದೆ.
ಉದ್ಯೋಗ ಖಾತ್ರಿ, ವಸತಿ, ಉಚಿತ ಎಲ್ ಪಿಜಿ ಸಿಲಿಂಡರ್ ಗಳು, ರೈತರಿಗೆ ಎಂಎಸ್ ಪಿ, ಎಸ್ ಸಿ –ಎಸ್ ಟಿ, ಒಬಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ.
ಎಲ್ಲರೂ ಒಟ್ಟಾಗಿ ಬಿಜೆಪಿ ಕಿತ್ತೊಗೆಯೋಣ ಮತ್ತು ಎಲ್ಲರಿಗೂ ಗೌರವಯುತ ಜೀವನ ನಡೆಸಲು ಅವಕಾಶ ಮಾಡಿಕೊಡೋಣ ಎಂದು ಮಮತಾ ಕರೆ ನೀಡಿದ್ದಾರೆ.