ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ತಿದ್ದುಪಡಿ ಮಸೂದೆ ಮತ್ತು 2023 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ 2023 ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗಿದೆ. ಬಳಿಕ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಎರಡು ‘ನಯಾ ಕಾಶ್ಮೀರ’ ಮಸೂದೆಗಳು ಐತಿಹಾಸಿಕವಾಗಿ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ಸಹಾಯ ಮಾಡುತ್ತವೆ ಮತ್ತು ಉನ್ನತೀಕರಿಸುತ್ತವೆ ಎಂದು ಹೇಳಿದ್ದಾರೆ.
ಯಾರಿಗಾದರೂ ಅವರ ಹಕ್ಕುಗಳನ್ನು ನೀಡುವುದಕ್ಕೂ ಮತ್ತು ಘನತೆಯಿಂದ ಅವರ ಹಕ್ಕುಗಳನ್ನ ನೀಡುವುದಕ್ಕೂ ವ್ಯತ್ಯಾಸವಿದೆ ಎಂದು ಹೇಳಿದ ಸಚಿವರು, ಈ ಎರಡು ಮಸೂದೆಗಳು ಕಳೆದ 70 ವರ್ಷಗಳಿಂದ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ನ್ಯಾಯ ಒದಗಿಸುತ್ತವೆ ಎಂದು ಪ್ರತಿಪಾದಿಸಿದರು.
ಎರಡು ಮಸೂದೆಗಳಲ್ಲಿ ಒಂದು ಭಯೋತ್ಪಾದನೆಯಿಂದಾಗಿ ಕಾಶ್ಮೀರವನ್ನು ತೊರೆಯಬೇಕಾದವರಿಗೆ ಪ್ರಾತಿನಿಧ್ಯ ನೀಡಲು ಪ್ರಯತ್ನಿಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಎರಡು ಮಸೂದೆಗಳಲ್ಲಿ ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಕಾಶ್ಮೀರಿ ವಲಸೆ ಸಮುದಾಯದ ಸದಸ್ಯರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಲು ಪ್ರಯತ್ನಿಸುತ್ತದೆ ಎಂದು ಅವರು ಶಾ ಹೇಳಿದರು.