Home ಟಾಪ್ ಸುದ್ದಿಗಳು ಲೋಕಸಭೆ ಕಲಾಪ: ನೋಟು ಅಮಾನ್ಯೀಕರಣದ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಕಾಂಗ್ರೆಸ್ ಆಗ್ರಹ

ಲೋಕಸಭೆ ಕಲಾಪ: ನೋಟು ಅಮಾನ್ಯೀಕರಣದ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಕಾಂಗ್ರೆಸ್ ಆಗ್ರಹ

ನವದೆಹಲಿ: ಲೋಕಸಭೆಯ ಕಲಾಪದಲ್ಲಿ  ನೋಟು ಅಮಾನ್ಯೀಕರಣದ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್, ಈ ಕುರಿತು ಶ್ವೇತ ಪತ್ರ ಹೊರಡಿಸುವಂತೆ ಆಗ್ರಹಿಸಿದೆ.

ಶೂನ್ಯವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ನೋಟು ಅಮಾನ್ಯೀಕರಣ ಕೇಂದ್ರ ಸರ್ಕಾರದ ವೈಫಲ್ಯವಾಗಿದೆ.  ಕೇಂದ್ರ ಸರ್ಕಾರ ಯೋಚನೆ ಮಾಡದೇ ನಿರ್ಧಾರ ತೆಗೆದುಕೊಂಡಿತ್ತು. ಆ ನಿರ್ಧಾರವೇ ಅತಾರ್ಕಿಕವಾಗಿತ್ತು ಎಂದು ಆರೋಪಿಸಿದ್ದಾರೆ.

ಕರೆನ್ಸಿ ನೋಟುಗಳ ಪರಿಚಲನೆಯಲ್ಲಿ ಶೇ.72 ರಷ್ಟು ಏರಿಕೆಯಾಗಿದೆ, ಕಪ್ಪು ಹಣ ಚಲಾವಣೆ ನಿಂತಿಲ್ಲ. ನೋಟು ಅಮಾನ್ಯೀಕರಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಮಧ್ಯೆ  ಮಧ್ಯಪ್ರವೇಶಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಕಾಂಗ್ರೆಸ್ ಭಯೋತ್ಪಾದನೆಯನ್ನು , ಅಕ್ರಮ ವಲಸಿಗರನ್ನು ಬೆಂಬಲಿಸುತ್ತಿದೆ, ಆದ್ದರಿಂದ ಕಾಂಗ್ರೆಸ್ ನೋಟು ಅಮಾನ್ಯೀಕರಣದ ನಿರ್ಧಾರವನ್ನು ವಿರೋಧಿಸುತ್ತಿದೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

Join Whatsapp
Exit mobile version