ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೆಚ್ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ವಿರುದ್ದ ಬೆದರಿಕೆ ಆರೋಪದಡಿ ದೂರು ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ದೂರು ಆಧರಿಸಿ ಎನ್ಸಿಆರ್ ದಾಖಲಾಗಿದೆ.
ಸೆ.28 ಹಾಗೂ ಸೆ.29ರಂದು ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರಿದ್ದಾರೆ. ತನ್ನ ವಿರುದ್ಧ ಸುಳ್ಳು ಆರೋಗ್ಯ ಪ್ರಮಾಣ ಪಡೆದ ಆರೋಪ ಮಾಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಆರೋಪದ ಅಡಿ ದೂರು ದಾಖಲಿಸಲಾಗಿದೆ. ಕರ್ನಾಟಕ ರಾಜ್ಯ ಕೆಡರ್ ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಮೌಖಿಕ ಬೆದರಿಕೆ ಹಾಕಿದ್ದಾರೆ. ಸುಳ್ಳು ದಾಖಲೆ ಪಡೆದು ಕರ್ನಾಟಕ ಕೆಡರ್ ನಲ್ಲಿ ಇದ್ದೇನೆ ಅಂತ ಸುಳ್ಳು ಆರೋಪ ಮಾಡಿದ್ದಾರೆ. ಲಂಚ ತೆಗೆದುಕೊಂಡಿರುವುದಾಗಿ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಜೊತೆಗೆ ಕುಮಾರಸ್ವಾಮಿ ಆಪ್ತ ರಮೇಶ್ ಬಾಬು ಮೇಲೆ ಕೂಡ ಚಂದ್ರಶೇಖರ್ ಆರೋಪ ಮಾಡಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಕ್ರಮಕೈಗೊಳ್ಳುವಂತೆ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ದೂರಿನ ಆಧಾರದಲ್ಲಿ ಸಂಜಯ್ ನಗರದಲ್ಲಿ ಎನ್ಸಿಆರ್ ದಾಖಲಾಗಿದೆ.