ಕಾವೇರಿ ನಿರಾವರಿ ನಿಗಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Prasthutha|

ರಾಮನಗರ: ಕಾವೇರಿ ನಿರಾವರಿ ನಿಗಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ದಾಳಿಯಾಗಿದ್ದು, ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದ ತಂಡದಿಂದ ದಾಳಿ ಮಾಡಲಾಗಿದೆ.

- Advertisement -

ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅರ್ಕಾವತಿ ಭವನದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗಿದೆ.

ಲೋಕಾಯುಕ್ತ ಅಧಿಕಾರಿಗಳು ನಿಗಮದ ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ. ಅಧಿಕಾರಿಗಳ ಮೊಬೈಲ್ ವಶಕ್ಕೆ ಪಡೆದು ತೀವ್ರ ಪರಿಶೀಲನೆ ಮಾಡಲಾಗುತ್ತಿದೆ.