ಸಬ್ ರಿಜಿಸ್ಟ್ರಾರ್ ಗಳ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಮಧ್ಯವರ್ತಿಗಳ ವಿರುದ್ಧ ಎಫ್ ಐಆರ್

Prasthutha|

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಮಧ್ಯವರ್ತಿಗಳ ವಿರುದ್ಧವೂ ಮೂರು ಪ್ರತ್ಯೇಕ ಎಫ್ ಐಆರ್ ಗಳನ್ನು ದಾಖಲಿಸಲಾಗಿದೆ.

- Advertisement -

ದಾಳಿ ವೇಳೆ ಮಧ್ಯವರ್ತಿಗಳು ಮತ್ತು ಏಜೆಂಟ್ ಗಳ ಬಳಿಯಿದ್ದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಪತ್ತೆಯಾದ ದಾಖಲೆಗಳನ್ನು ಲೋಕಾ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ದಾಖಲೆಗಳು ಮಧ್ಯವರ್ತಿಗಳ ಕೈಸೇರಿದ್ದು ಹೇಗೆ ಎಂಬ ಬಗ್ಗೆಯೂ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.

ಇದರಿಂದ ಸಬ್ ರಿಜಿಸ್ಟ್ರಾರ್ ಕಚೇರಿಯ ಕೆಲ ಅಧಿಕಾರಿಗಳಿಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ನಿವೇಶನ, ರಿಯಲ್ ಎಸ್ಟೇಟ್ ವ್ಯವಹಾರ ಸಂಬಂಧ ಕಡತ ಪತ್ತೆಯಾಗಿದೆ. ಸೇಲ್ ಡೀಡ್ ಪ್ರತಿಗಳು, ಜಿಪಿಎ ಪತ್ರ, ಟ್ಯಾಕ್ಸ್ ರಸೀದಿ ಜಪ್ತಿ ಮಾಡಲಾಗಿದೆ.

- Advertisement -

ಲೋಕಾಯುಕ್ತ ತನಿಖಾಧಿಕಾರಿಗಳು ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಜೊತೆಗಿನ ನಂಟು ಪತ್ತೆ ಹಚ್ಚಲಿದ್ದಾರೆ. ಸದ್ಯ ಕಡತಗಳ ಪರಿಶೀಲನೆ ನಡೆಸಿ, ಇಂಚಿಂಚೂ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ಭ್ರಷ್ಟಾಚಾರದ ಆರೋಪದ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರು ಕಳೆದವಾರ ಬೆಂಗಳೂರು ಮತ್ತು ಸುತ್ತಮುತ್ತಲಿನ 20 ಕ್ಕೂ ಹೆಚ್ಚು ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದದರು. ಸುಮಾರು 150 ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 15, ಬೆಂಗಳೂರು ಗ್ರಾಮಾಂತರದಲ್ಲಿ 4 ಮತ್ತು ರಾಮನಗರದ 2 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದರು.



Join Whatsapp