Home ಟಾಪ್ ಸುದ್ದಿಗಳು ಮನಪಾ ಆಯುಕ್ತರ ಮನೆ ಸೇರಿ ರಾಜ್ಯದ 30 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಮನಪಾ ಆಯುಕ್ತರ ಮನೆ ಸೇರಿ ರಾಜ್ಯದ 30 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಮಂಗಳೂರು ಸೇರಿದಂತೆ ರಾಜ್ಯದ 30 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಇಬ್ಬರು ಲೋಕಾಯುಕ್ತ ಎಸ್ ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ರಾಜ್ಯದ ಒಟ್ಟು 12 ಕೇಸ್ ಗಳಲ್ಲಿ ಭಾಗಿಯಾಗಿದ್ದವರ ಮನೆಗಳ ಮೇಲೆ ದಾಳಿ ನಡೆದಿದೆ. ರಾಜ್ಯದ 30 ಕಡೆಗಳಲ್ಲಿ ಒಟ್ಟು ನೂರಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.


ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.


ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಅವರ ಮನೆಗೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


ತುಮಕೂರಿನ ವಾಣಿಜ್ಯ ಇಲಾಖೆ ಹೆಚ್ಚುವರಿ ನಿರ್ದೇಶಕರಾದ ಮುದ್ದುಕುಮಾರ್, ಯಾದಗಿರಿಯ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಬಲವಂತ್ ರಾಥೋಡ್, ದೊಡ್ಡಬಳ್ಳಾಪುರದ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಆರ್.ಸಿದ್ದಪ್ಪ, ಹೆಬ್ಬಗೋಡಿ ನಗರಸಭೆ ಆಯುಕ್ತ ಕೆ.ನರಸಿಂಹ ಮೂರ್ತಿ, ಬೆಂಗಳೂರಿನ ಕೆಐಡಿಬಿ ಅಧಿಕಾರಿ ಬಿ.ವಿ.ರಾಜಾ, ಕಮರ್ಷಿಯಲ್ ಟ್ಯಾಕ್ಸ್ ಜಂಟಿ ಆಯುಕ್ತ ರಮೇಶ್ ಕುಮಾರ್ ಮನೆ ಮೇಲೆ ದಾಳಿ ನಡೆದಿದೆ.

Join Whatsapp
Exit mobile version