ಲೋಕಾಯುಕ್ತ ಇನ್ಸ್ ಪೆಕ್ಟರ್ ರಫೀಕ್ ನಿಧನ

Prasthutha|

ಬೆಂಗಳೂರು : ಲೋಕಾಯುಕ್ತ ಇನ್ಸ್ ಪೆಕ್ಟರ್ ಮುಹಮ್ಮದ್‌ ರಫೀಕ್‌ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ.

- Advertisement -

ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಸ್ನಾನಕ್ಕೆ ತೆರಳಿದ ವೇಳೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಕುಟುಂಬ ಸದಸ್ಯರು ವೈದ್ಯರನ್ನು ಕರೆ ತಂದಿದ್ದರು. ಆದರೆ ವೈದ್ಯರು ಬರುವ ಹೊತ್ತಿಗಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಭೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಭೀಮಾ ಎಂದು ಹೆಸರಿಟ್ಟು ಒಂದು ಹಸುವಿನ ಕರುವನ್ನು ಸಾಕಿದ್ದರು. ಇದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಹೆಸರು ಮಾಡಿದ್ದರು. ಸಮಾಜ ಸೇವೆಯಲ್ಲಿ ಯಾವಾಗಲೂ ತೊಡಗಿಕೊಂಡಿದ್ದರು. ಬೆಂಗಳೂರು ನಗರದ ಭೈಯಪ್ಪನಹಳ್ಳಿ ಠಾಣೆ, ಸಿಇಎನ್, ಲೋಕಾಯುಕ್ತ ಸೇರಿದಂತೆ ವಿವಿಧ ಠಾಣೆಗಳಲ್ಲಿ ಮಹಮ್ಮದ್ ರಫಿಕ್ ಕರ್ತವ್ಯ ನಿರ್ವಹಿಸಿದ್ದಾರೆ.



Join Whatsapp