ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಚಿವ ಝಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌

Prasthutha|

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

- Advertisement -

ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್‌ ನೀಡಿದ್ದಾರೆ.

ಇ.ಡಿ ದಾಳಿಯ ಬಳಿಕ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಗಳಿಕೆ ಸಂಬಂಧ ತನಿಖೆಗೆ ಇ.ಡಿ ಸೂಚಿಸಿತ್ತು. ಕಳೆದೆರಡು ವರ್ಷದಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ.



Join Whatsapp