ಲೋಕಾಯುಕ್ತ ದಾಳಿ: ಕಾನ್ ಸ್ಟೆಬಲ್ 1.80 ಕೋಟಿ ರೂ. ಒಡೆಯ

Prasthutha|

ಬೀದರ್: ಚಿಟಗುಪ್ಪ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ವಿಜಯಕುಮಾರ ಎಂಬುವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿ, ಜಿಲ್ಲೆಯ ವಿವಿಧ ಕಡೆ 1.80 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಹಚ್ಚಿರುವುದು ಗೊತ್ತಾಗಿದೆ.

- Advertisement -


ಬೀದರ್ ತಾಲ್ಲೂಕಿನ ಹೊಚಕನ್ನಳ್ಳಿ ಹಾಗೂ ಹಳ್ಳಿಖೇಡ್ (ಕೆ) ಗ್ರಾಮದಲ್ಲಿ 15 ಎಕರೆ ಕೃಷಿ ಜಮೀನು, ಹುಮನಾಬಾದ್ ಪಟ್ಟಣದಲ್ಲಿ ಒಂದು ಬಂಗಲೆ, ಮೂರು ನಿವೇಶನ, ₹20 ಲಕ್ಷ ಮೌಲ್ಯದ ಜೀವ ವಿಮೆ, ಒಂದು ಕಾರು, ಮೂರು ದ್ವಿಚಕ್ರ ವಾಹನಗಳು, ₹10 ಲಕ್ಷ ಮೌಲ್ಯದ ಗೃಹ ಬಳಕೆಯ ವಸ್ತುಗಳು, ₹5 ಲಕ್ಷ ಬೆಲೆಬಾಳುವ ಚಿನ್ನಾಭರಣಗಳು ಸೇರಿದಂತೆ ಇತರೆ ವಸ್ತುಗಳನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿ, ವಶಕ್ಕೆ ಪಡೆದರು.

Join Whatsapp