ಬೆಂಗಳೂರು: ಇಂದು ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ.
ಇದರೊಂದಿಗೆ ಬೆಳ್ಳಂಬೆಳಗ್ಗೆಯೇ ಸಿಹಿ ನಿದ್ದೆಯಲ್ಲಿದ್ದ ಕೆಲ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರು, ರಾಮನಗರ, ಬಾಗಲಕೋಟೆ, ಬೆಳಗಾವಿ, ತುಮಕೂರು, ಕಲಬುರಗಿ, ಯಾದಗಿರಿ, ಕೋಲಾರ ಸೇರಿದಂತೆ ಇನ್ನು ಇತರೆ ಜಿಲ್ಲೆಗಳಲ್ಲೂ ಲೋಕಾಯುಕ್ತ ದಾಳಿಯಾಗಿದೆ. ಇತ್ತೀಚೆಗೆ ಅಂದರೆ ಮೇ 31 ರಂದು ಸಹ ಕರ್ನಾಟಕ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದರು. ಇದೀಗ ಇಂದು ಸಹ ದಾಳಿ ಮಾಡಿದೆ.