ಬೆಳ್ಳಂಬೆಳಗ್ಗೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ

Prasthutha|

ಚಿತ್ರದುರ್ಗ: ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ. ಚಿತ್ರದುರ್ಗ, ದಾವಣಗೆರೆ ಸೇರಿ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -

 ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಕೆ.ಮಹೇಶ್ ಪತ್ನಿ BBMP ಎಇ ಹೆಚ್.ಭಾರತಿ ಮನೆ ಮೇಲೆ ದಾಳಿ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳು ದಾವಣಗೆರೆಯ ಜಯನಗರದಲ್ಲಿರುವ ಮಹೇಶ್ ಅವರ ಮನೆ ಬಾಗಿಲು ತಟ್ಟಿ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಇಲಾಖೆ, ಬೆಂಗಳೂರಿನ BBMP ಕಚೇರಿ ಮೇಲೂ ದಾಳಿ ನಡೆಯುವ ಸಾಧ್ಯತೆ ಇದೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಬಂದ ಹಿನ್ನೆಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp